ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೆಲ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು (ಸೆ.27): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೆಲ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ದುರಸ್ತಿಪಡಸಿದೇ ಇರುವ ಸರ್ಕಾರದ ಕ್ರಮವನ್ನು ಖಂಡಿಸಿ ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಹೌದು ನಾನು ಕಾಂಗ್ರೆಸ್ ಕಾರ್ಯಕರ್ತ. ನಾನು ಓಟ್ ಹಾಕೋದೇ ಕಾಂಗ್ರೆಸ್ಸಿಗೆ. ಶಾಸಕ ರಾಜೇಗೌಡರಿಗೆ ಮತ ಹಾಕೋದು. ಆದರೆ, ನಮ್ಮ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಶಾಸಕ ರಾಜೇಗೌಡ ಅವರ ಮನೆಯಿಂದ ಕೇವಲ 10 ಕಿ.ಮೀ. ದೂರದ ಈ ರಸ್ತೆ ಶಾಸಕ ರಾಜೇಗೌಡ ಅವರಿಗೆ ಕಾಣಿಸುವುದಿಲ್ಲವೋ ಅಥವಾ ಗೊತ್ತೇ ಇಲ್ಲವೋ ಎಂದು ಎನ್.ಆರ್. ಪುರ ತಾಲೂಕಿನ ಖಾಂಡ್ಯ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತ ತಬ್ರೀಸ್ ಖಾನ್ ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.


