
ಕೊಳ್ಳೇಗಾಲ: ತಾಲೂಕಿನ ತಿಮ್ಮರಾಜಿಪುರ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶವನ್ನು ಪಡೆದಿದ್ದು. 50 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು ಅದರಲ್ಲಿ 50 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ಕುಮಾರಿ ಮೋನಿಕಾ .ಎಲ್ 612 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ ಇವರಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಚಾಮರಾಜನಗರ ಮತ್ತು ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.



