
ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ನಗರದ ಹನುಮಂತಪ್ಪ ವೃತ್ತದಲ್ಲಿ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎತ್ತಿನಗಾಡಿಯಲ್ಲಿ ಸಂಚರಿಸುತ್ತಾ ಹಾಗೂ ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಸುಮಾರು 2 ಕಿಲೋಮೀಟರ್ಗಳ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.





