
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation)ಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭಿಸಿದೆ. ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) 17 ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕ ಆಧಾರದ ಮೇಲಿದ್ದು, ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಅನುಭವ ಗಳಿಸಲು ಹಾಗೂ ಇಸ್ರೋದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿಕೊಡಲಿವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 12ರಿಂದ ಆರಂಭವಾಗಿದ್ದು, ಜುಲೈ 11 ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ನೇಮಕಾತಿಯ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ “Career” ವಿಭಾಗದಲ್ಲಿ ಪ್ರಕಟಿಸಿರುವ ಅಧಿಸೂಚನೆಯನ್ನು ಪರಿಶೀಲಿಸಬಹುದು. ಆಸಕ್ತರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.




