
ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಾಳದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಪ್ರತೀಕ್ಷಾ ಅವರು ಯೋಗದ ಮಹತ್ವವನ್ನು ವಿವರಿಸುತ್ತಾ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಯೋಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಯೋಗಾಭ್ಯಾಸದಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದ ಅವರು, ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಸ್ವತಃ ಪ್ರದರ್ಶಿಸಿ ವಿದ್ಯಾರ್ಥಿಗಳಿಂದ ಅಭ್ಯಾಸ ಮಾಡಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಯೋಗಾಸನಗಳಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಶಾಲೆಯ ‘ಅಮೃತ ವೇದಿಕೆ’ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಯೋಗದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.




