
ಕಾರ್ಕಳ: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರ 7ನೇ ಪುಣ್ಯಸ್ಮರಣೆಯ ಅಂಗವಾಗಿ ಜುಲೈ 4ರಂದು ರಕ್ತದಾನ ಶಿಬಿರ ಹಾಗೂ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30ಕ್ಕೆ ದೇವಾಡಿಗ ಸುಧಾರಕ ಸಂಘ (ರಿ) ತಾಲೂಕು ಕಚೇರಿ ಸಮೀಪದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರಿಗೆ ನಮನ ಸಲ್ಲಿಸುವುದರ ಜೊತೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವೂ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ. ಅಲ್ಲದೆ, ಬ್ಲಾಕ್ ಮಟ್ಟದ ಪಕ್ಷದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



