
ಕಾರ್ಕಳ: ಕಾರ್ಕಳದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾದ ದಿವಂಗತ ಹೆಚ್. ಗೋಪಾಲ ಭಂಡಾರಿಯವರ 7ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ದೇವಾಡಿಗ ಭವನದಲ್ಲಿ ರಕ್ತದಾನ ಶಿಬಿರ ಹಾಗೂ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು, ಗೋಪಾಲ ಭಂಡಾರಿಯವರ ಅಭಿಮಾನಿಗಳು ಹಾಗೂ ಹಿತೈಷಿಗಳು ಶಿಬಿರದಲ್ಲಿ ಭಾಗವಹಿಸಿ ಒಟ್ಟು 56 ಯೂನಿಟ್ ರಕ್ತದಾನ ಮಾಡಿದರು. ಇದೇ ವೇಳೆ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗೆ ಶಿಕ್ಷಣ ಸಹಾಯಧನವನ್ನೂ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಗೋಪಾಲ ಭಂಡಾರಿಯವರು ಎರಡು ಅವಧಿಗೆ ಶಾಸಕರಾಗಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಶುದ್ಧಹಸ್ತ ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದು, ಅವರ ಆದರ್ಶಗಳು ಸದಾ ಪ್ರೇರಣೆಯಾಗಿವೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಗೋಪಾಲ ಭಂಡಾರಿಯವರು ತೋರಿಸಿದ ಹಾದಿಯಲ್ಲಿ ನಡೆಯುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು. ರಾಜ್ಯ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಗೋಪಾಲ ಭಂಡಾರಿಯವರ ಆಡಳಿತ ನೈಪುಣ್ಯವನ್ನು ಸ್ಮರಿಸಿದರೆ, ಹಿರಿಯ ಕಾಂಗ್ರೆಸಿಗ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಅವರು ಗೋಪಾಲ ಭಂಡಾರಿಯವರ ಆದರ್ಶಗಳನ್ನು ಕಾರ್ಕಳದ ಮೂಲೆಮೂಲೆಗೂ ತಲುಪಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದರು. ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್ ನುಡಿ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಶೇಖರ ಮಡಿವಾಳ, ಸಿರಿಯಣ್ಣ ಶೆಟ್ಟಿ, ಸುಭಿತ್ ಎನ್.ಆರ್., ಅಜಿತ್ ಹೆಗ್ಡೆ ಮಾಳ, ಕೃಷ್ಣ ಶೆಟ್ಟಿ ನಲ್ಲೂರು, ಸುನಿಲ್ ಭಂಡಾರಿ, ಉದಯ ಶೆಟ್ಟಿ ಕುಕುಂದೂರು, ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಅಶ್ಫಕ್ ಅಹ್ಮದ್, ಶೇಖ್ ಶಬೀರ್ ಮಿಯ್ಯಾರು, ಭಾನು ಬಾಸ್ಕರ ಪೂಜಾರಿ, ಅನಿತಾ ಡಿಸೋಜ, ಸುಧಾಕರ ಶೆಟ್ಟಿ ಮುಡಾರು, ರೀನಾ ಜೂಲಿಯೆಟ್ ಡಿಸೋಜ, ರಾಜೇಂದ್ರ ದೇವಾಡಿಗ, ಸೂರಜ್ ಶೆಟ್ಟಿ ನಕ್ರೆ, ಶೋಭಾ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರಭಾಕರ ಬಂಗೇರ ಸ್ವಾಗತಿಸಿದರು. ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಧನ್ಯವಾದ ಅರ್ಪಿಸಿದರೆ, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.




