
ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅನಿಲ್ ಎಸ್. ಪೂಜಾರಿ ಮಾಳ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಅವರ ಮಾರ್ಗದರ್ಶನ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ, ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದ ರಾವ್ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರ ಶಿಫಾರಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದ್ದಾರೆ. ಅನಿಲ್ ಎಸ್. ಪೂಜಾರಿ ಅವರು ಪ್ರಸ್ತುತ ಮಾಳ-ಕೆರ್ವಾಶೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದು, ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ರಿ.) ನಿರ್ದೇಶಕರಾಗಿ ಹಾಗೂ ಕಾರ್ಕಳ ಬಿಲ್ಲವ ಸಂಘದ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಮಾಳ ಗ್ರಾಮ ಪಂಚಾಯತ್ ಸದಸ್ಯರಾಗಿ ಸತತ ಮೂರು ಬಾರಿ ಆಯ್ಕೆಯಾಗಿರುವ ಅವರು ವಿವಿಧ ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿರುವ ಹಿನ್ನೆಲೆ ಅವರಿಗೆ ಈ ಜವಾಬ್ದಾರಿಯನ್ನು ವಹಿಸಲಾಗಿದೆ.
ವರದಿ: ಅರುಣ್ ಭಟ್ ಕಾರ್ಕಳ




