ಬೆಂಗಳೂರು: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಯ ಒಳಹರಿವು ಮತ್ತೆ ಹೆಚ್ಚಾಗಿದೆ. ಒಂದೇ ದಿನದಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬಂದಿದ್ದು, ವೇದಗಂಗಾ ಹಾಗೂ ದೂದಗಂಗಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಿದೆ. ಇದರ ಪರಿಣಾಮವಾಗಿ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ಐದಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡಿದ್ದು, ಯಡೂರು-ಕಲ್ಲೋಳ ಸಂಪರ್ಕ ಸೇತುವೆಯು ಎರಡನೇ ಬಾರಿ ಮುಳುಗಡೆಯಾಗಿದ್ದು, ಇದರ ಪರಿಣಾಮ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಒಳಹರಿವು ಹೆಚ್ಚಾಗಿದೆ. ಮತ್ತೊಂದೆಡೆ, ಜುಲೈ ತಿಂಗಳು ಅಂತ್ಯ ಬರುತ್ತಿದ್ದರೂ ಬೆಂಗಳೂರಿನ ಕುಡಿಯುವ ನೀರಿನ ಮೂಲವಾದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಇನ್ನೂ100 ಅಡಿ ದಾಟದಿರುವುದು ಗಮನಾರ್ಹವಾಗಿದೆ.
ಆಲಮಟ್ಟಿ ಜಲಾಶಯ (ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ)
ಗರಿಷ್ಠ ಮಟ್ಟ: 519.60 ಮೀಟರ್
ಇಂದಿನ ನೀರಿನ ಮಟ್ಟ: 518.25 ಮೀಟರ್
ಒಳಹರಿವು: 63.792 ಕ್ಯೂಸೆಕ್
ಹೊರಹರಿವು: 25.000 ಕ್ಯೂಸೆಕ್
