
ಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂದುವರಿದ ಭಾರೀ ಮಳೆ ಗಾಳಿಯ ಅಬ್ಬರಕ್ಕೆ ಬೃಹತ್ ಮರವೊಂದು ಧರೆಗುರುಳಿದ್ದು, ಚಿಕ್ಕಮಗಳೂರು ತಾಲೂಕಿನ ಶಂಕರ್ ಫಾಲ್ಸ್ ಬಳಿ ನಡೆದ ಈ ಘಟನೆಯಿಂದಾಗಿ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆಯ ಎರಡು ಕಡೆಗಳಲ್ಲೂ ಕಿ.ಮೀ. ಗಟ್ಟಲೇ ವಾಹನಗಳು ನಿಂತ ಪರಿಣಾಮವಾಗಿ ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆ ಮಧ್ಯದಲ್ಲಿಯೇ ಸ್ಥಳಿಯರು ಮರ ತೆರವುಗೊಳಿಸಿದ್ದು ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೂ ಮಳೆ ಚುರುಕುಗೊಂಡಿದೆ.
ವರದಿ: ಸಂತೋಷ್ ಅತ್ತಿಗೆರೆ




