
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಹುಲುಗಾರುಬೈಲ್ ಗ್ರಾಮದ ಬಳಿ ಭಾರೀ ಮಳೆಯಿಂದ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಳೆದ ಎರಡು ಗಂಟೆಗಳಿನಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿ ಸಿರಿಮನೆ ಫಾಲ್ಸ್ಗೆ ತೆರಳುವ ರಸ್ತೆ ಬಂದ್ ಆಗಿದ್ದು, ಭಾನುವಾರವಾದ ಕಾರಣ ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರು ಪರದಾಡುವಂತಾಗಿದೆ. ಸ್ಥಳೀಯರು ಮರ ತೆರವು ಕಾರ್ಯವನ್ನು ಆರಂಭಿಸಿದ್ದು, ಭಾರೀ ಮಳೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಪರಿಸ್ಥಿತಿ ಸಹಜವಾಗಲು ಅಧಿಕಾರಿಗಳು ಹಾಗೂ ಸ್ಥಳೀಯರು ಕ್ರಮ ಕೈಗೊಳ್ಳುತ್ತಿದ್ದಾರೆ.





