
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಂಟೆಂಟ್ (CSAM), ಕೃತಕ ಬುದ್ಧಿಮತ್ತೆಯಿಂದ (AI) ಸೃಷ್ಟಿಯಾಗುವ ವಿಷಯಗಳು ಹಾಗೂ ಪ್ರಮುಖ ವ್ಯಕ್ತಿಗಳ ಪೋಸ್ಟ್ಗಳನ್ನು ತೆಗೆದುಹಾಕುವ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮೆಟಾ ಸಂಸ್ಥೆಯಿಂದ ಸ್ಪಷ್ಟನೆ ಕೇಳಲು ಮುಂದಾಗಿದೆ. ಈ ವಾರ ಮೆಟಾದ ಹಿರಿಯ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಭೇಟಿ ಮಾಡಿ ಭಾರತೀಯ ಕಾನೂನುಗಳ ಪಾಲನೆ, ಕಂಟೆಂಟ್ ಮಾಡರೇಷನ್ ಹಾಗೂ ಎಐ ಆಧಾರಿತ ಕಂಟೆಂಟ್ನಿಂದ ಎದುರಾಗುತ್ತಿರುವ ಸವಾಲುಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ತಿಳಿಸಿದ್ದಾರೆ.




