
TET: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ, ಅಂದರೆ ಟಿಇಟಿ ಅರ್ಹತೆ ಕಡ್ಡಾಯ ಎಂಬುದನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ 31, 2027ರವರೆಗೆ ಇದ್ದ ಗಡುವನ್ನು ಇದೀಗ ಆಗಸ್ಟ್ 31, 2028ರವರೆಗೆ ಮುಂದೂಡಲಾಗಿದೆ. ಈ ಕುರಿತು ಲೋಕಸಭೆಯಲ್ಲಿ ನಡೆದ ಕಲಾಪದ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಈ ವಿಸ್ತರಣೆಯಿಂದ ಇನ್ನೂ ಟಿಇಟಿ ಉತ್ತೀರ್ಣರಾಗದ ಸರ್ಕಾರಿ ಶಾಲಾ ಶಿಕ್ಷಕರಿಗೆ ಹೆಚ್ಚುವರಿ ಸಮಯ ದೊರೆತಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸಲು ಮತ್ತೊಂದು ಅವಕಾಶ ಲಭಿಸಿದೆ.




