
ಚಿಕ್ಕಮಗಳೂರು: ನಗರದ ಕಲ್ಯಾಣನಗರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಆಲ್ದೂರು-ಆವುತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ನಿಶದ್ ಎಂಬ 14 ವರ್ಷದ ವಿದ್ಯಾರ್ಥಿ ಮಲಗಿದ್ದ ಕೋಣೆಯಲ್ಲೇ ಬಟ್ಟೆ ಒಣಗಿಸಲು ಕಟ್ಟಿದ್ದ ದಾರವನ್ನು ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿ ಈ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಇತರೆ ವಿದ್ಯಾರ್ಥಿಗಳು ಕೂಡಲೇ ಆತನನ್ನು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಮೊದಲು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬಾಲಕನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದ್ದು, ಗ್ಲುಕೋಸ್ ಹಾಗೂ ವೆಂಟಿಲೇಟರ್ ನೆರವಿನೊಂದಿಗೆ ಬಾಲಕನನ್ನು ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ವರದಿ: ಸಂತೋಷ್ ಅತ್ತಿಗೆರೆ




