
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ಮುಂದುವರಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಶಾಸಕರ ಭವನದ ಬಳಿಯ ವಾಲ್ಮೀಕಿ ಪ್ರತಿಮೆ ಬಳಿ ಶಾಸಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಪ್ಪು ಟೀ-ಶರ್ಟ್ ಧರಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಧರಿಸಿದ್ದ ಟೀ-ಶರ್ಟ್ಗಳ ಮೇಲೆ ‘ನಾಗೇಂದ್ರ ರಾಜೀನಾಮೆ ನೀಡಲಿ’ ಎಂಬ ಬರಹ ಹಾಕಲಾಗಿತ್ತು.




