
ಕಾರ್ಕಳ: ನಗರದ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಹಿಳಾ ಸದಸ್ಯರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಆಗಸ್ಟ್ 28ರಂದು ಶುಕ್ರವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ವಿಶೇಷ ಪೂಜೆ, ಮಹಾಪೂಜೆ ಹಾಗೂ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ವಿಜೃಂಭಣೆಯಿಂದ ನಡೆದವು. ಕಾರ್ಯಕ್ರಮದ ಅಂಗವಾಗಿ ಭಕ್ತರಿಗೆ ಅನ್ನಸಂತರ್ಪಣೆಯನ್ನೂ ಆಯೋಜಿಸಲಾಗಿತ್ತು. ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸರ್ವ ಸದಸ್ಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
ವರದಿ: ಅರುಣ್ ಭಟ್ ಕಾರ್ಕಳ




