ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಾಳದಲ್ಲಿ ಆಗಸ್ಟ್ 29ರಂದು ವಿಶ್ವ ಕ್ರೀಡಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾರ್ಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಮಂತ್ರಿ ಶರಣ್ಯಾ ಜೋಶಿ ಅವರು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳಿಗಾಗಿ ವಿವಿಧ ಮನೋರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿ ಶ್ರೀಮತಿ ಶೋಭಾ ಜೈನ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಅರುಣ್ ಭಟ್ ಕಾರ್ಕಳ
