


ವಿಟ್ಲ: ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಶ್ರೀ ಚಿತ್ರಾಪುರ ಮಠಾಧೀಶರಾದ ಶ್ರೀ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ಚಾತುರ್ಮಾಸ ಸುಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಮಹಿಳಾ ಭಜನಾ ಮಂಡಳಿ, ಲಕ್ಷ್ಮಿಪುರ ಕಾರ್ಕಳ ಇವರ ವತಿಯಿಂದ ವಿಶೇಷ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಭಜನಾ ಸೇವೆಯಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು.
