
ಮೂಡಿಗೆರೆ: ಸತ್ಯ, ನ್ಯಾಯ ಹಾಗೂ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಧ್ವನಿ ಸಂಘದ ಮೂಡಿಗೆರೆ ತಾಲೂಕು ಅಧ್ಯಕ್ಷರಾಗಿ ಹಳಸೆ ಗ್ರಾಮದ ಜಯಕುಮಾರ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಆಯ್ಕೆ ಬಳಿಕ ಮಾತನಾಡಿದ ಜಯಕುಮಾರ್ ಹಳಸೆ, 2013ರಲ್ಲಿ ಕೆಸವಳಲು ರಾಘವೇಂದ್ರ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಕರ್ನಾಟಕ ಧ್ವನಿ ಸಂಘವು ಹಲವು ಜನಪರ ಹೋರಾಟಗಳು ಹಾಗೂ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಸಾರ್ವಜನಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದೆ ಎಂದು ತಿಳಿಸಿದರು. ಹಿಂದಿನ ತಂಡದ ಜನಪರ ಕಾರ್ಯಗಳನ್ನು ಮುಂದುವರಿಸಿಕೊಂಡು ನೂತನ ತಂಡವೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದರು. ಉಪಾಧ್ಯಕ್ಷರಾಗಿ ನೂತನ್ ಬೆಟ್ಟಗೆರೆ, ಪ್ರಧಾನ ಕಾರ್ಯದರ್ಶಿಯಾಗಿ ಪುನೀತ್ ಕಡಿದಾಳ್, ಖಜಾಂಚಿಯಾಗಿ ಸಾರ್ಥಕ್ ಮುತ್ತಿಗೆಪುರ, ಪಟ್ಟಣ ಅಧ್ಯಕ್ಷರಾಗಿ ಮನೋಜ್ ಹಾಗೂ ಕಾರ್ಯದರ್ಶಿಯಾಗಿ ಪುನೀತ್ ಕುಮಾರ್ ಆಯ್ಕೆಯಾಗಿದ್ದಾರೆ. ಗೋಣಿಬೀಡು ಹೋಬಳಿ ಅಧ್ಯಕ್ಷರಾಗಿ ಅಭಿ ಹಾಗೂ ಬಣಕಲ್ ಹೋಬಳಿ ಅಧ್ಯಕ್ಷರಾಗಿ ನವೀನ್ ಆಯ್ಕೆಯಾಗಿದ್ದು, ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




