
ಚಿಕ್ಕಮಗಳೂರು: ಮೂಡಿಗೆರೆ ಪಟ್ಟಣದ ಬಿಳಗುಳ ಗ್ರಾಮದಲ್ಲಿ ಮನಕಲಕುವ ಗೋಕಳ್ಳತನದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರ ಸಮೀಪ ಗೋಕಳ್ಳರು ಹಸುವಿನ ಕತ್ತಿಗೆ ಹಗ್ಗ ಹಾಕಿ ಧರಧರನೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಸುವನ್ನು ಕರೆದೊಯ್ಯುತ್ತಿದ್ದ ವೇಳೆ ತಾಯಿ ಹಸು ಹಿಂಬಾಲಿಸಿ ಓಡಿರುವ ದೃಶ್ಯವೂ ಸೆರೆಯಾಗಿದೆ. ಮೂಡಿಗೆರೆ ತಾಲೂಕಿನಾದ್ಯಂತ ಗೋಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿರುವ ಹಿಂದೂ ಸಂಘಟನೆಗಳು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿವೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




