
ಚಿಕ್ಕಮಗಳೂರು: ಜಿಲ್ಲೆಯ ಸಮಗ್ರ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಮಂಡಳಿಯ ಸದಸ್ಯರಾದ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಡಾ. ಮನೋಜ್ ಸಿಂಗ್ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಮತ್ತು ಬೆಂಗಳೂರು ನಡುವೆ ಹೊಸ ಇಂಟರ್ಸಿಟಿ ರೈಲು ಆರಂಭಿಸುವ ಅಗತ್ಯವನ್ನು ಮನವರಿಕೆ ಮಾಡಿದ್ದು, ಹುಬ್ಬಳ್ಳಿ–ಚಿಕ್ಕಮಗಳೂರು ನಡುವೆ ಸಂಚರಿಸುತ್ತಿರುವ ವಿಶೇಷ ರೈಲಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ್ದಾರೆ. ಇದರೊಂದಿಗೆ ಬೆಂಗಳೂರು–ಮಡಗಾಂವ್ ನಡುವೆ ಇತ್ತೀಚೆಗೆ ಆರಂಭಗೊಂಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ವಿಧಿಸಲಾಗುತ್ತಿರುವ ಶೇ.40ರಷ್ಟು ಹೆಚ್ಚುವರಿ ದರವನ್ನು ರದ್ದುಗೊಳಿಸುವಂತೆ ಹಾಗೂ ಪ್ರಯಾಣಿಕರ ಸಮಯ ಉಳಿತಾಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆಮಾಹಿತಿ ಹಂಚಿಕೊಂಡಿದ್ದಾರೆ.




