
ಕರ್ನಾಟಕ ಸರ್ಕಾರಕ್ಕೆ ಮಗ್ಗಲು ಮುಳ್ಳಾಗಿ ಕಾಡುತ್ತಿರುವ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿನ ಕಾಲ್ತುಳಿತದಲ್ಲಿ ಸಾವಿಗೀಡಾದ ಘಟನೆ ಇದೀಗ ಮತ್ತಷ್ಟು ತಲೆನೋವಾಗಿ ಸರ್ಕಾರವನ್ನು ಕಾಡುವ ನಿರೀಕ್ಷೆ ಇದೆ.
ಪ್ರತಿ ಪಕ್ಷ ಬಿಜೆಪಿ ಈ ಪ್ರಕಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನ ಮಾಡುತ್ತಿದೆ.ಈ ದುರ್ಘಟನೆಯ ನೇರಹೊಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿದ್ದು, ರಾಜಿನಾಮೆ ಕೊಡಬೇಕೆಂದು ಆಗ್ರಹಿಸಲಿದ್ದಾರೆ. ಅಂತೆಯೇ ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎನ್ ರವಿ ಕುಮಾರ್ ಅವರು ತಿಳಿಸಿದ್ದಾರೆ. ಈ ಪ್ರತಿಭಟನೆಗೆ ಸಾಗರೋಪಾದಿ ಸಂಖ್ಯೆಯಲ್ಲಿ ಜನರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.