
ಶಿವಮೊಗ್ಗ: ರಾಮಣ್ಣ ಎಂಬುವವರ ಕಂಪ್ಲೆಕ್ಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಹತ್ತಿಕೊಂಡ ಬೆಂಕಿಯಿಂದ ಇಡೀ ಕಾಂಪ್ಲೆಕ್ಸ್ ಹೊಗೆಯಿಂದ ತುಂಬಿದ್ದು, ಸ್ಥಳೀಯರು ಇದನ್ನು ಗಮನಿಸಿ ತಕ್ಷಣ ಮೆಸ್ಕಾಂ ಸಿಬ್ಬಂದಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿಯನ್ನು ನೀಡಿದ್ದರು. ಆ ತಕ್ಷಣವೇ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಕಡಿತಗೊಳಿಸಿದರು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿಯನ್ನು ಆರಿಸಿವಲ್ಲಿ ಯಶಸ್ವಿಯಾದರು. ಬೆಂಕಿ ಅನಾಹುತದಲ್ಲಿ ವಸ್ತುಗಳಿಗೆ ಹಾನಿಯುಂಟಾಗಿದೆಯೇ ಎಂಬ ಮಾಹಿತಿ ತಿಳಿಯಬೇಕಿದೆ. ಈ ಘಟನೆಯು ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಕಾಂಪ್ಲೆಕ್ಸ್ನಲ್ಲಿ ನಡೆಯಲಾಗಿದೆ ಎಂದು ತಿಳಿದು ಬಂದಿದೆ.