
94 ವರ್ಷಗಳ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ಬರೆದ ಕೆಆರ್ಎಸ್ ಜಲಾಶಯ. ಜೂನ್ ತಿಂಗಳಲ್ಲಿಯೇ ಸಂಪೂರ್ಣ ಭರ್ತಿಯಾಗಿರುವ ಕಂದಂಬಾಡಿಕಟ್ಟೆ. ಮುಖ್ಯಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎನ್. ಚಲುವರಾಯ ಸ್ವಾಮಿ ಕೃಷ್ಣರಾಜ ಸಾಗರಕ್ಕೆ ಬಾಗಿನ ಅರ್ಪಿಸಿದರು. ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಾಯಿತು.
ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಿ, ಅಣೆಕಟ್ಟು ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದವು. 124.80 ಸಾಮರ್ಥ್ಯ ಹೊಂದಿರೋ ಜಲಾಶಯ ಭರ್ತಿಯಾದ ಹಿನ್ನಲೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ಜೂನ್ನಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ಧರಾಮಯ್ಯ ಪಾತ್ರರಾಗಿದ್ದಾರೆ.