
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದುರ್ಗದ ಹಳ್ಳಿಯಲ್ಲಿ ಕಾಡುಕೋಣದ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಸಂಭವಿಸಿದ್ದು. ಮೃತ ದುರ್ದೈವಿ ರಮೇಶ್ (52) ಎಂಬವರಾಗಿದ್ದು, ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಕಾಡು ಕೋಣ ದಾಳಿ ನಡೆಸಿದೆ.
ಇತ್ತೀಚಿನ ದಿನಗಳಲ್ಲಿ ಮೂಡಿಗೆರೆ-ಕಳಸ ಭಾಗದಲ್ಲಿ ಕಾಡುಕೋಣಗಳ ತಿರುಗಾಟ ಹೆಚ್ಚಾಗಿದ್ದು, ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಈ ಪ್ರದೇಶದಲ್ಲಿ ವಾಸವಿರುವ ಜನತೆ ತಮ್ಮ ದೈನಂದಿನ ಕೃಷಿ ಹಾಗೂ ತೋಟದ ಕೆಲಸಗಳಲ್ಲಿ ತೊಡಗಿಕೊಳ್ಳುವಲ್ಲಿ ಆತಂಕ ಹೊಂದಿದ್ದಾರೆ.
ಘಟನೆಯ ನಂತರ ಬಾಳೂರು ಠಾಣೆ ಪೋಲಿಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡು ಪ್ರಾಣಿಗಳ ದಾಳಿಗೆ ಶಾಶ್ವತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳೀಯರು ಕಾಡುಕೋಣ ದಾಳಿಗೆ ಶಾಶ್ವತ ಬ್ರೇಕ್ ಹಾಕುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.