
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೋರೇಟ್ ಪರ ನೀತಿಗಳು ಎಂದು ಒಕ್ಕೂಟಗಳು ಲೇಬಲ್ ಮಾಡಿರುವುದನ್ನು ವಿರೋಧಿಸಿ “ಭಾರತ್ ಬಂದ್” ಮುಷ್ಕರ ಮಾಡುಲಾಗುತ್ತಿದೆ. ವಿವಿಧ ರೈತ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆಗಳ ಸಮನ್ವಯದೊಂದಿಗೆ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟವು ನಾಳೆ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ.
ಕೇಂದ್ರ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯ ಅವರ ಬಳಿ ಕಾರ್ಮಿಕ ವೇದಿಕೆಯು 17 ಅಂಶಗಳ ಬೇಡಿಯನ್ನು ಕಳೆದ ವರ್ಷ ಸಲ್ಲಿಸಿದ್ದರು. ಕೇಂದ್ರ ಸರ್ಕಾರವು ವಾರ್ಷಿಕ ಕಾರ್ಮಿಕ ಸಮಾವೇಶವನ್ನು 10 ವರ್ಷಗಳಿಂದ ಆಯೋಜಿಸಿಲ್ಲ. ಆದ್ದರಿಂದ ಕಾರ್ಮಿಕ ವರ್ಗದ ಹಿತಕ್ಕೆ ವಿರುದ್ಧವಾದ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.
ಸಾರ್ವಜನಿಕ ವಲಯದಲ್ಲಿ ಗುತ್ತಿಗೆ ಆಧಾರಿತ ನೇಮಕಾತಿಗಳು ಕಾರ್ಮಿಕರ ಭದ್ರತೆಗೆ ಧಕ್ಕೆ ತರುತ್ತಿವೆ. ಸರ್ಕಾರಿ ಮತ್ತು ಸಾರ್ವಜನಿಕ ವಲಯದಲ್ಲಿ ಶಾಶ್ವತ ಉದ್ಯೋಗ ಸೃಷ್ಟಿಯ ಕೊರತೆಯಿದ್ದು. ಸರ್ಕಾರವು ಕಾರ್ಪೋರೇಟ್ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಸಂಘಟಿತ, ಗುತ್ತಿಗೆ ಮತ್ತು ವಿವಿಧ ಯೋಜನೆಗಳಡಿ ಕೆಲಸ ಮಾಡುತ್ತಿರುವ ಮಾಸಿಕ 26,000 ರೂ ರಾಷ್ಟ್ರೀಯ ಕನಿಷ್ಟ ವೇತನ ನಿಗದಿಪಡಿಸುವಂತೆ ಆಗ್ರಹಿಸಲಾಗಿದೆ. ಇದು ಪ್ರಸ್ತುತದ ಜೀವನ ವೆಚ್ಚಕ್ಕೆ ಅನುಗುಣವಾಗಿರಬೇಕೆಂದು ಅವರು ಪ್ರತಿಪಾದಿಸದರು. ಆಹಾರ, ಔಷಧ, ಕೃಷಿ ಉತ್ಪನ್ನಗಳಂತಹ ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ತೆಗೆದು ಹಾಕಿ, ಪೆಟ್ರೊಲಿಯಂ ಉತ್ಪನ್ನಗಳು ಮತ್ತು ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕವನ್ನು ಇಳಿಸಿ, ಹಣದುಬ್ಬರವನ್ನು ನಿಯಂತ್ರಿಸಬೇಕು. ಕಾರ್ಮಿಕರ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಒಕ್ಕೂಟಗಳು ಆರೋಪಿಸಿದೆ. ಕಾರ್ಮಿಕರ ಕೆಲಸದ ಸಮಯವನ್ನು ಹೆಚ್ಚಿಸುವ ನೀತಿಗಳನ್ನು ವಿರೋಧಿಸಲಾಗುತ್ತಿದೆ.