
ಮೂಲ್ಕಿ: ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಓರ್ವ ವ್ಯಕ್ತಿಯು ಮಟ್ಕಾ ಜೂಜಾಟಕ್ಕಾಗಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿರುವ ಖಚಿತ ಮಾಹಿತಿಯನ್ನು ಪಡೆದುಕೊಂಡು ಮೂಲ್ಕಿ ಪೋಲಿಸರು ದಾಳಿ ನಡೆಸಿದ ಘಟನೆ ನಡೆದಿದ್ದು. ಲಿಂಗಪ್ಪಯ್ಯ ಕಾಡು ನಿವಾಸಿ ಮಂಜುನಾಥ್, ಅಶೋಕ್ ಎಂಬುವವರನ್ನು ಪೋಲಿಸರು ವಶಕ್ಕೆ ಪಡೆದು ಜೂಜಾಟಕ್ಕೆ ಸಂಗ್ರಹಿಸಿದ್ದ ಹಣ ಹಾಗೂ ಮತ್ತಿತರ ಪರಿಕರಗಳನ್ನು ವಶಪಡಿಸಿಕೊಂಡಿದ್ದು. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.