
ಸಾಗರ: ಬೆಳ್ಳಂಬೆಳಗ್ಗೆ 4.45 ರ ವೇಳೆಗೆ ತಾಲ್ಲೂಕಿನ ಉಳ್ಳೂರು ತಿರುವಿನ ಬಳಿ ಸಾಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಟ್ರಕ್ ಹಾಗೂ ಬೆಂಗಳೂರಿನಿಂದ ಸಾಗರದ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕ ಸಚಿನ್ ಎಂಬುವವರಿಗೆ ಅಪಘಾತದಲ್ಲಿ ತೀವ್ರ ಗಾಯವಾಗಿದ್ದು ಅವರನ್ನು ಸಾಗರದಿಂದ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಎಸ್ಆರ್ಟಿಸಿ ಬಸ್ನಲ್ಲಿದ್ದ 28 ಪ್ರಯಾಣಿಕರಲ್ಲಿ ನಾಲ್ಕು ಜನ ಪ್ರಯಾಣಿಕರಿಗೆ ಸ್ವಲ್ಪ ಗಾಯವಾಗಿದ್ದು ಅವರನ್ನು ಸಾಗರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನಾ ಸ್ಥಳಕ್ಕೆ ಆನಂದಪುರ 112 ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.