
ಚಿಕ್ಕಮಗಳೂರು: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪುರ ಗ್ರಾಮಪಂಚಾಯಿತಿ ಕಾರ್ಯದರ್ಶಿ ಬಿ.ಎಸ್. ಶುಭಲಕ್ಷ್ಮಿಯವರನ್ನು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನರವರು ಅಮಾನತು ಮಾಡಿದ್ದಾರೆ. ಶುಭಲಕ್ಷ್ಮಿಯವರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ, ಹಣ ದುರ್ಬಳಕೆ ಮತ್ತು ನಿಯಮ ಉಲ್ಲಂಘನೆ ಎಂದು ಗ್ರಾಮಸ್ಥರಾದ ಆರ್. ಮಂಜುನಾಥ ಆರೋಪದ ಮೇರೆಗೆ ಇಲಾಖೆಯು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡಿದೆ.