
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆನಕಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮ ಗಣೇಶ್, ಮೇ ೨೯ರಂದು ಅವಿರೋಧವಾಗಿ ಎರಡು ತಿಂಗಳ ಹಿಂದೆ ಆಯ್ಕೆಯಾಗಿದ್ದು, ದಲಿತ ಮಹಿಳೆಯೆನ್ನುವ ಕಾರಣಕ್ಕೆ ಸದಸ್ಯರು ಗ್ರಾಪಂ.ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸದೆ ಹಿಂದೆ ಸರಿಯುತ್ತಿದ್ದಾರೆ ಮತ್ತು ಒಂದೂ ಸಾಮಾನ್ಯ ಸಭೆಗೆ ಹಾಜರಾಗದೆ ಗೈರಾಗಿದ್ದಾರೆ ಎಂಬ ಗಂಭೀರ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.
ಸದಸ್ಯರು ಸ್ವಯಂ ಪ್ರೇರಣೆಯಿಂದ ಸಭೆಗೆ ಬಂದು, ತಮ್ಮ ಗ್ರಾಮದ ಅಭಿವೃದ್ದಿ ಕಾರ್ಯಗಳಿಗೆ ಸಹಕರಿಸಬೇಕು ಎಂದು ಹೊನ್ನಾಳಿಯ ತಾಪಂ ಇಓ ಪ್ರಕಾಶ್ ಪ್ರತಿಕ್ರಿಯೆ ನೀಡಿದರು. ಅಧಿಕಾರಿ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.