
ಉಡುಪಿ: ಉಡುಪಿಯಂತಹ ಮುಂದುವರೆದ ಜಿಲ್ಲೆಯಲಿ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಬಸವರಾಜ್ ಜಿ. ಹುಬ್ಬಳ್ಳಿ ಅವರು ಕಳೆದ ನಾಲ್ಕು ತಿಂಗಳಿಂದ ಕರ್ತವ್ಯವನ್ನು ನಿರ್ವಹಿಸುತ್ತಿದ್ದು. ಇದೀಗ ಕರ್ತವ್ಯ ಲೋಪ ಕೇಳಿ ಬರುತ್ತಿದೆ. ವೈದ್ಯಾಧಿಕಾರಿ, ಶುಶ್ರೂಷಕರು ಹಾಗೂ ಸಿಬ್ಬಂದಿ ಸೇವೆಯಲ್ಲಿ ಹಾಗೆಯೇ ಬಿಲ್, ಟೆಂಡರ್ ಮುಂತಾದ ಕಾರ್ಯಗಳಲ್ಲಿ ಭ್ರಷ್ಟಾಚಾರ ಮಾಡಿರುವುದಾಗಿ ಧ್ವನಿ ಕೇಳಿ ಬಂದಿದ್ದು. ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಇಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ರವರಿಗೆ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.