
ಪುತ್ತೂರು: ದಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆ ನಲುಗಿ ಹೋಗಿದ್ದು, ಪುತ್ತೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಿಗೆ ಇಂದು ಪುತ್ತೂರು ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.
ಸಮುದ್ರ ತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಹೋಗದಂತೆ ಸೂಚನೆಯನ್ನು ನೀಡಿದ್ದಾರೆ. ಹಾಗೆಯೇ ಪೋಷಕರು ಮಕ್ಕಳನ್ನು ಸಮುದ್ರ ತೀರಗಳಿಗೆ, ತಗ್ಗ ಪ್ರೇಶಕ್ಕೆ ಹಾಗೂ ನದಿ ತೀರಗಳಿಗೆ ತೆರಳದಂತೆ ಜಾಗರೂಕತೆಯಿಂದ ಇರಬೇಕೆಂದು ತಿಳಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಕಟ್ಟೆಚ್ಚರ ನೀಡಿದ್ದಾರೆ.