
ಸಾಗರ: ಜೂನ್ 24ರ ಬೆಳಿಗ್ಗೆ ಸಾಗರದಿಂದ ಶಿವಮೊಗ್ಗದ ಕಡೆಗೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸ್ಗೆ ಸಾಗರ ತಾಲೂಕಿನ ಆನಂದಪುರ ಬಳಿಯ ಮುಂಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಏಕಾಏಕೀ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, 12 ಗಾಯಾಳು ಪ್ರಯಾಣಿಕರನ್ನು ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯುಂಟಾಯಿತು.