ಶೃಂಗೇರಿ: ( ಜೈ ಟಿವಿ ಸುದ್ದಿ) ವಿವಿಧ ಸರ್ಕಾರಿ ಹಾಗೂ ಖಾಸಗಿ ಸೇವೆಗಳನ್ನು ಒಂದೇ ಸೂರಿ ನಡಿ ಲಭ್ಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಒನ್ ಸೇವಾ ಕೇಂದ್ರ ಸ್ಥಾಪಿಸಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿದೆ ಎಂದು ತಹಶೀಲ್ದಾರ್ ಅನೂಪ್ ಸಂಜೋಗ್ ಆರ್.ಎಂ ಹೇಳಿದರು. ಶೃಂಗೇರಿ ಪಟ್ಟಣದ ಭಾರತೀ ಬೀದಿಯ ಲಯನ್ಸ್ ಕ್ಲಬ್ ಮುಂಭಾಗದಲ್ಲಿ ನೂತನವಾಗಿ ಕರ್ನಾಟಕ ಒನ್ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು 29-07-2025ರ ಮಂಗಳವಾರದಂದು 10:00 ಗೆ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ ಒನ್ ಪೋರ್ಟಲ್ ಒಂದು ಆನ್ಲೈನ್ ಪ್ಲಾಟ್ಫಾರ್ಮ್ ಆಗಿದ್ದು, ಒಂದೇ ಪೋರ್ಟಲ್ ಅಡಿಯಲ್ಲಿ ನಾಗರಿಕ-ಕೇಂದ್ರಿತ ಸೇವೆಗಳನ್ನು ಸುಲಭಗೊಳಿಸಲು ರಾಜ್ಯ ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದ್ದು ಎಲ್ಲಾ ಸೇವೆಗಳನ್ನು ಪ್ರವೇಶಿಸಲು ಜನರು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.
ಈ ಕಚೇರಿಯಲ್ಲಿ ವಿದ್ಯುತ್,ನೀರು,ದೂರವಾಣಿ ಮತ್ತು ಮೊಬೈಲ್ ಬಿಲ್ ಪಾವತಿ, ಆಧಾರ್ ನೋಂದಣಿ, ಪಾನ್ ಕಾರ್ಡ್, ಆಸ್ತಿ ತೆರಿಗೆ, ಆಧಾಯ ಜಾತಿ ಪ್ರಮಾಣ ಪತ್ರ, ಪಹಣಿ ಮುಂತಾದ ಸೇವೆಗಳಿಗೆ ಸಾರ್ವಜನಿಕರು ಸಂಪರ್ಕಿಸಬಹುದಾಗಿದೆ.
