
ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಇಳಿಯಲಿರುವ ಹಿನ್ನೆಲೆ, ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ನಿಗಮಗಳಿಗೆ ಕೋಟ್ಯಾಂತರ ನಷ್ಟವಾಗುವ ಸಾಧ್ಯತೆ ಇರುವುದರ ಜೊತೆಗೆ ಸಾವಿರಾರು ಪ್ರಯಾಣಿಕರು ಸಂಚಾರ ತೊಂದರೆ ಅನುಭವಿಸಬಹುದೆಂಬ ಆತಂಕ ಎದುರಾಗಿದೆ. ಈ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾರಿಗೆ ನೌಕರರ ಒಕ್ಕೂಟ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ತೀವ್ರ ಚರ್ಚೆಯ ಮಹತ್ವದ ಸಭೆ ನಡೆಯುತ್ತಿದೆ. ಈ ಸಮಿಕ್ಷೆಯಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಬಸ್ಗಳು ನಾಳೆ ರಸ್ತೆಗಿಳಿಯುತ್ತವೆಯೋ ಅಥವಾ ಸಂಪೂರ್ಣ ಮುಷ್ಕರವಾಗುತ್ತದೆಯೋ ಎಂಬುದನ್ನು ನೋಡಬೇಕಿದೆ, ಇದು ಜನರಲ್ಲಿ ಹೆಚ್ಚಿನ ಆತಂಕವನ್ನು ಉಂಟುಮಾಡಿದೆ.