
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಅವರು ನಗರದ ಪ್ರಮುಖ ಮೂರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಬೆಂಗಳೂರಿನಲ್ಲಿ ತಂಗಲಿರುವ ಅವರು, ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸುವ ಜೊತೆಗೆ, ಬೆಳಗಾವಿ–ಬೆಂಗಳೂರು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದು, ಜೊತೆಗೆ ನಮ್ಮ ಮೆಟ್ರೋ 3ನೇ ಹಂತದ ಎರಡು ಕಾರಿಡಾರ್ಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಬಾರಿಗೆ ಬಿಜೆಪಿ ಹಮ್ಮಿಕೊಳ್ಳುತ್ತಿದ್ದ ರೋಡ್ ಶೋ ಮತ್ತು ಪಕ್ಷದ ಇತರ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.