
ಆರೋಗ್ಯಕ್ಕೆ ಪ್ರತಿದಿನ ಮೂಸಂಬಿ ರಸ ಸೇವನೆಯಿಂದ ಹಲವು ಉಪಯೋಗಗಳಿವೆ. ಮೂತ್ರಪಿಂಡದ ಕಲ್ಲಗಳ ರಚನೆಯನ್ನು ತಡೆಯಲು ಸಹಾಯ ಮಾಡುತ್ತದೆ. ಮೂಸಂಬಿಯಲ್ಲಿ ವಿಟಮಿನ್ ಸಿ ಅಂಶವು ಇರುವುದರಿಂದ ಅದು ಚರ್ಮದ ಆರೋಗ್ಯಕ್ಕೆ ಸಹಾಯಕವಾಗಿದೆ. ಚರ್ಮದ ಕಾಂತಿಯನ್ನು, ಮೊಡವೆಗಳನ್ನು ಕಡಿಮೆ ಮಾಡುತ್ತದೆ. ಇದು ಕಡಿಮೆ ಕ್ಯಾಲೊರಿಯನ್ನು ಹೊಂದಿರುವುದರಿಂದ ತೂಕ ಇಳಿಸುವವರಿಗೆ ಉತ್ತಮ ಆಯ್ಕೆಯಾಗಿದೆ. ನಿರ್ಜಲೀಕರಣ ಸಮಸ್ಯೆಯನ್ನು ಹಾಗೂ ದೇಹವನ್ನು ತಂಪಾಗಿರಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದ್ದು, ಶೀತ, ಕೆಮ್ಮು ಮತ್ತು ಇತರ ಸೋಂಕುಗಳ ಅಪಾಯ ಕಡಿಮೆಯಾಗುತ್ತದೆ. ಇದರಲ್ಲಿರುವ ಫ್ಲೇವನಾಯ್ಡ್ಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಕಾರಿಯಾಗಿದೆ. ಹಾಗೂ ಆಹಾರದ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲಾಗುತ್ತದೆ.