
ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಚಂಡಮಾರುತ ಪ್ರಸರಣದ ಭಾಗವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಹವಮಾನ ಇಲಾಖೆಯು 2-3 ದಿನಗಳ ಕಾಲ ಭಾರೀ ಮಳೆಯಾಗಿದೆ ಎಂದು ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರಿನ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಎಚ್ಚರ ವಹಿಸುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಸೂಚನೆ ನೀಡಿದೆ. ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಆಗಸ್ಟ್ 17-20ರ ವರೆಗೂ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 18ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವನ್ನು ವಹಿಸುವಂತೆ ಸೂಚನೆ ನೀಡಿದೆ. ಮಳೆಯಿಂದಾಗಿ ರೈತಾಪಿ ವರ್ಗದವರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.