ಚಿಕ್ಕಮಗಳೂರು: ವರುಣನ ಆರ್ಭಟದಿಂದಾಗಿ ಮಲೆನಾಡು ನಲುಗಿ ಹೋಗಿದ್ದು, ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ಆರ್ಪುರ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಆಲ್ದೂರು, ವಸ್ತರೆ, ಖಾಂಡ್ಯ, ಆವತಿ ಹೋಬಳಿ ವ್ಯಾಪ್ತಿಯಲ್ಲಿ ಅಂಗನವಾಡಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿದ್ದು. ಶಿವಮೊಗ್ಗ ಡಿಸಿ ಆದೇಶವನ್ನು ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಇಂದು ರಜೆ ನೀಡಿದ್ದಾರೆ.
