
ಮಂಗಳೂರು: ಮೆಸ್ಕಾಂ ಕಾರ್ಪೋರೇಟ್ ಕಛೇರಿಯಲ್ಲಿ ಸದ್ಭಾವನಾ ದಿನಾಚರಣೆಯ ಅಂಗವಾಗಿ ನಿನ್ನೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನೆರವೇರಿತು. ಪ್ರಮಾಣ ವಚನದ ವಿಧಿಯನ್ನು ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ವಸಂತ ಶೆಟ್ಟಿಯವರು ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್, ಆರ್ಥಿಕ ಸಲಹೆಗಾರರಾ ವಲ್ಸಪಿ ಟಿ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ್ ನಾಯಕ್, ಪ್ರಧಾನ ವ್ಯವಸ್ಥಾಪಕ ಡಾ.ಬಿ.ಎಸ್ ಮಂಜುನಾಥ ಸ್ವಾಮಿ ಹಾಗೂ ಅಧಿಕಾರಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.