
ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಯವರು ಬಿಜೆಪಿ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು. ಮಹೇಶ್ ತಿರೋಡಿಯವರನ್ನು ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ಇಂದು ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಲಾಗಿದೆ ಎನ್ನಲಾಗಿದೆ. ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ವಿಚಾರಣೆ ಬೆಳಗ್ಗೆ 11 ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಪ್ರಾರಂಭಿಸಿದ ವೇಳೆಯಲ್ಲಿ ಸಮಯಾವಕಾಶ ಕೋರಿದ್ದರಿಂದ ಇಂದು ಮಧ್ಯಾಹ್ನ 03ಗಂಟೆಗೆ ಮುಂದೂಡಿದ್ದಾರೆ ಎನ್ನಲಾಗಿದೆ.