
ಶಿವಮೊಗ್ಗ: ವರುಣನ ಆರ್ಭಟ ಮುಂದುವರೆದ ಕಾರಣದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 05 ತಾಲ್ಲೂಕಿನ ಶಾಲಾ ಕಾಲೇಜಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ ಹಾಗೂ ಸೊರಬ ತಾಲ್ಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ರಜೆಯನ್ನು ತಹಶೀಲ್ದಾರ್ ಘೋಷಣೆ ಮಾಡಿದ್ದಾರೆ. ಮಳೆ ಹೆಚ್ಚಾಗುವ ಸಂಭವವಿರುವುದರಿಂದ ಮಕ್ಕಳನ್ನು ಗಮನದಲ್ಲಿರಿಸಿಕೊಂಡು ರಜೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ರಜಾದ ದಿನದಲ್ಲಿ ಶಾಲೆಯ ಪಠ್ಯ ಕ್ರಮಗಳನ್ನು ಸರಿದೂಗಿಸಿಕೊಳ್ಳಲು ಆದೇಶ ನೀಡಿದ್ದಾರೆ. ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ರಜೆ ಅನ್ವಯಿಸುತ್ತದೆ.