
ಚಿಕ್ಕಮಗಳೂರು: ಚಾರ್ಮಡಿ ಘಾಟಿಯಲ್ಲಿ ಸರಣಿ ಅಪಘಾತವಾಗಿದ್ದು. ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಯಾಗಿದೆ. ಹಿಂಬದಿಯಿಂದ ಬರುತ್ತಿದ್ದ ಲಾರಿ ಅಪಘಾತವಾಗಿದ್ದ ಲಾರಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗ್ಯಾಸ್ ಸಿಲಿಂಡರ್ ಲಾರಿಗೆ ಡಿಕ್ಕಿಯಾದ ಕೆಎಸ್ಆರ್ಟಿಸಿ ಬಸ್. ಅಪಘಾತದ ಹಿನ್ನಲೆ ಚಾರ್ಮಡಿ ಘಾಟ್ನಲ್ಲಿ ವಾಹ ಸಂಚಾರ ಅಸ್ತವ್ಯಸ್ತವಾಗಿದೆ. ಅಪಘಾತದಿಂದಾಗಿ ಕೆಲ ಕಾಲ ತಿರುವುಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಘಟನಾ ಸ್ಥಳಕ್ಕೆ ಬಣಕಲ್ ಹಾಗೂ ಬೆಳ್ತಂಗಡಿ ಪೋಲಿಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಉಜಿರೆ ಆಸ್ಪತ್ರೆಗೆ ರವಾನಿಸಲಾಗಿದೆ. ದಕ್ಷಿಣಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಡಿ ಘಾಟಿಯಲ್ಲಿ ಈ ಘಟನೆ ಸಂಭವಿಸಿದೆ.