
ಮಂಗಳೂರು: ಬೆಳ್ಳಂಬೆಳಗ್ಗೆ ಬುಧವಾರದಂದು ಮಂಗಳೂರು ನಗರದ ಹೊರ ವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಅರೋಮಾಝನ್ ಎಂಬ ಕಂಪೆನಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಗ್ನಿ ಅವಘಡ ನಡೆದ ಸ್ಥಳಕ್ಕೆ ಎಂಸಿಎಫ್, ಎನ್ಎಂಪಿಎ ಹಾಗೂ ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಬಂದು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಅವಗಡಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ.