ಬೆಂಗಳೂರು: ಅತಿ ಹೆಚ್ಚು ಭದ್ರತೆ ಹೊಂದಿರುವ ವಿಧಾನಸೌಧ, ಹೈಕೋರ್ಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದರೋಡೆ ಮತ್ತು ಹಲ್ಲೆ ಘಟನೆಗಳು ನಡೆದಿರುವುದು ಆತಂಕವನ್ನು ಉಂಟುಮಾಡಿದೆ. ವಿಧಾನಸೌಧ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಯುವಕರ ಗುಂಪೊಂದು ವಿದ್ಯಾರ್ಥಿ ಮತ್ತು ಅವನ ಸಹೋದರನ ಮೇಲೆ ದಾಳಿ ಮಾಡಿ ₹9,000 ಕ್ಕೂ ಹೆಚ್ಚು ನಗದು, ಮೊಬೈಲ್ ಸೇರಿ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದೆ. ಇದೇ ಸ್ಥಳದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ, ನೇಪಾಳ ಮೂಲದ 40-50 ಮಂದಿ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಪೋಲಿಸರು ಸ್ಥಳಕ್ಕೆ ಧಾವಿಸಿ ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ.
