ಬೆಂಗಳೂರು: ಕರ್ನಾಟಕ ಕಾಂಗ್ರೇಸ್ನಲ್ಲಿ ಅಧಿಕಾರ ಹಂಚಿಕೆಯಲ್ಲಿ ಉಂಟಾದ ಆತಂರಿಕ ಸಮಸ್ಯೆಗಳು ಹೈಕಮಾಂಡ್ ಮಟ್ಟಕ್ಕೆ ತಲುಪಿದ್ದು, ರಾಹುಲ್ ಗಾಂಧೀ ಹಾಗೂ ರಾಜ್ಯದ ಮುಖಂಡರಿಂದ ವರದಿಗಳು ಮತ್ತು ಮಾಹಿತಿ ಪಡೆದು ಚರ್ಚೆ ನಡೆಸಿದ್ದು ಈ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬೆಂಗಳೂರಿಗೆ ಆಗಮಿಸಿದ ನಂತರ ರಾಹುಲ್ ಗಾಂಧಿಯೊಂದಿಗೆ ಸುಮಾರು ಅರ್ಧಗಂಟೆ ದೂರವಾಣಿ ಮೂಲಕ ಮಾತಾಡಿದ್ದಾರೆ. ರಾಜ್ಯದಲ್ಲಿ ಉಂಟಾದ ಅಸಮಾಧಾನ ಮತ್ತು ಅಧಿಕಾರ ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಹೈಕಮಾಂಡ್ ಗಂಭೀರವಾಗಿ ದೆಹಲಿಯಿಂದಲೇ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದು, ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧೀ ಒಟ್ಟಾಗಿ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುತ್ತೇವೆ ಎಂದು ಭರವಸೆ ನೀಡಿದರು.
