ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಆದೇಶಿಸಿದ ಪ್ರಕಾರ ಇಂದು ಖುದ್ದು ಕೋರ್ಟ್ಗೆ ಹಾಜರಾಗಬೇಕಿದ್ದ ಬಿ.ಎಸ್ ಯಡಿಯೂರಪ್ಪ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಅಲ್ಲಿ ವಿಚಾರಣೆ ನಡೆಸಿದ ಬಳಿಕ ಪ್ರಕರಣಕ್ಕೆ ತಾತ್ಕಾಲಿಕ ತಡೆ ದೊರೆಯಿತು. 17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2024 ಮಾರ್ಚ್ನಲ್ಲಿ ಸದಾಶಿವನಗರದ ಪೊಲೀಸರು ಪ್ರಕರಣ ದಾಖಲಿಸಿದ್ದು, ನಂತರ ಸಿಐಡಿಗೆ ವರ್ಗಾಯಿಸಲಾಗಿತ್ತು, ಸಮನ್ಸ್ ರದ್ದು ಪಡಿಸುವ ಯಡಿಯೂರಪ್ಪ ಅವರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಹಿರಿಯ ವಕೀಲ ಸಿದ್ದಾರ್ಥ ಲೂಥ್ರಾ ಅವರ ವಾದದ ನಂತರ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಗೆ ತಡೆ ನೀಡಿದೆ.
