ಚಿಕ್ಕಮಗಳೂರು: ಕೊಟ್ಟಿಗೆಹಾರ ಹಾಗೂ ಬಣಕಲ್ನಲ್ಲಿ ದತ್ತ ಜಯಂತಿ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ವಾಹನ ಸಂಚಾರ ಮಾತ್ರ ಸಾಮಾನ್ಯವಾಗಿತ್ತು. ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿಗೆ ಕರಾವಳಿ ಭಾಗದಿಂದ ೩೪೪ ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಾಹನಗಳು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿವೆ. ಪೋಲೀಸರು ವಾಹನಗಳಿಗೆ ಸೀರಿಯಲ್ ನಂಬರ್ ಪತ್ರ ಅಂಟಿಸಿ ಸಂಚಾರ ಸುಗಮಗೊಳಿಸಿದ್ದು, ಗಡಿ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದರು, ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಆಟೋ ಚಾಲಕರು ಬಾಡಿಗೆ ಇಲ್ಲದೆ ಪರದಾಡಿದ್ದು, ಬಸ್ಗಳಲ್ಲಿ ಸಹ ಕಡಿಮೆ ಪ್ರಯಾಣಿಕರು ಕಂಡು ಬಂದರು.
