ಶೃಂಗೇರಿ: ಕಿಗ್ಗಾದ ಶಾಂತ ಸಮೇತ ಋಷ್ಯಶೃಂಗ ದೇವಸ್ಥಾನದಲ್ಲಿ ಶಾಸಕರ ಪ್ರದೇಶಾಭಿವೃದ್ಧಿಯಿಂದ 1೦ ಲಕ್ಷದ ಅನುದಾನದಲ್ಲಿ ನಿರ್ಮಾಣಗೊಂಡ ರಥವನ್ನು ಶಾಸಕ ಟಿ.ಡಿ ರಾಜೇಗೌಡ ಹಸ್ತಾಂತರಿಸಿದರು. ಸರ್ಕಾರವು ಕೇವಲ ಧಾರ್ಮಿಕ ಚಟುವಟಿಕೆಗಳಿಗಾಗಿ ಧಾರ್ಮಿಕ ದತ್ತಿ ಇಲಾಖೆಗಳ ಮೂಲಕ ಅನುದಾನ ನೀಡುವುದಿಲ್ಲ ಬದಲಾಗಿ ಸಾಮಾಜಿಕ, ಸಾಂಸ್ಕೃತಿಕ ಮಹತ್ವದ ಉದ್ದೇಶಗಳಿಗಾಗಿ ನೀಡಲಾಗುತ್ತದೆ. ಹಾಗೆಯೇ ದೇವಸ್ಥಾನಗಳ ಅಭಿವೃದ್ಧಿಯಿಂದ ಸ್ಥಳೀಯವಾಗಿ ಅಭಿವೃದ್ಧಿ ಹೊಂದುತ್ತದೆಂದು ಹೇಳಿದರು.
