ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆದ ’ನನ್ನ ತೇಜಸ್ವಿ’ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ, “ಅವರು ತೇಜಸ್ವಿ ಅವರ ಪ್ರೇಮದ ಬದುಕನ್ನು, ಸಾಂಸಾರಿಕ ಬದುಕನ್ನು ತುಂಬಾ ಅಧ್ಬುತವಾಗಿ ರಂಗದ ಮೇಲೆ ತರುವ ಮೂಲಕ ಅವರ ಖಾಸವಿ ಬದುಕಿನ ವಿವರಗಳನ್ನು ತೆರೆದಿಡುತ್ತದೆ ಮತ್ತು ತೇಜಸ್ವಿ ಪ್ರತಿಷ್ಠಾನದಲ್ಲಿ ನೂತನವಾಗಿ ಚಿಟ್ಟೆ ಉದ್ಯಾನವನ, ಆರ್ಕಿಡ್ ಲೋಕ ಅನಾವರಣಗೊಂಡಿದ್ದು ಜೀವಲೋಕದ ಬೆರಗು, ಮಹತ್ವವನ್ನು ತಿಳಿಸುವ ಕಾರ್ಯ ಮಾಡಲಾಗಿದೆ” ಎಂದು ಅಧ್ಯಕ್ಷ ಡಾ.ಪ್ರದೀಪ್ ಕೆಂಜಿಗೆ ಹೇಳಿದರು. ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ, ದೀಪಾ ಹಿರೇಗುತ್ತಿ ಅವರು ತೇಜಸ್ವಿ ಲೋಕ ಎಂಬ ಶೀರ್ಷಿಕೆಯಡಿ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು, ಈ ಬಾರಿ ಬೆಂಗಳೂರಿನ ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗುವ ಫಲಪುಷ್ಪ ಪ್ರದರ್ಶನದಲ್ಲಿ ತೇಜಸ್ವಿ ಅವರ ಕುರಿತ ವಸ್ತು ವಿಷಯ ಆಧರಿಸಿ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ’ನನ್ನ ತೇಜಸ್ವಿ’ ನಾಟಕದ ನಿರ್ದೇಶಕ ಬಿ.ಎಂ.ಗಿರಿರಾಜ, ಕಲಾವಿದರಾದ ಪರಮ್ ಕಲಾಮಾಧ್ಯಮ ಮುಂತಾದವರು ಇದ್ದರು.
